ಬೆಳಗಾವಿ: ಬಿಎಸ್ ಯಡಿಯೂರಪ್ಪ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಗೂಡ್ಸ್ ಆಟೋ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮೀನ್ ಯರಗಟ್ಟಿ (45) ಎಂದು ಗುರುತಿಸಲಾಗಿದೆ.

ಈ ಆಟೋ ತರಕಾರಿ ತುಂಬಿಕೊಂಡು ಬೆಳಗಾವಿ ಕಡೆಗೆ ಬರುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಳಗೆ ಬಿದ್ದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ಕೂಡ ರಸ್ತೆ ಬದಿ ಬಿದ್ದಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.