ಬೆಳಗಾವಿ: ಶ್ರಾವಣ ಸೋಮವಾರದಂದು ದೇವಸ್ಥಾನವನ್ನು ಶುಚಿಗೊಳಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಅಹಿತಕರ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿಯಲ್ಲಿ ನಡೆದಿದೆ. ಸುಳೇಭಾವಿ ಗ್ರಾಮದ ವಾಲ್ಮೀಕಿ ದೇವಸ್ಥಾನವನ್ನು ಸ್ವಚ್ಛಗೊಳಿಸುವ ವೇಳೆ ಈ ಘಟನೆ ನಡೆದಿದೆ.
ಕಲಾವತಿ ಮಾರುತಿ ಬಿದರವಾಡಿ (41) ಮತ್ತು ಸವಿತಾ ಫಕೀರಪ್ಪ ಒಂಟಿ (36) ದೇವಸ್ಥಾನವನ್ನು ಸ್ವಚ್ಛಗೊಳಿಸುವ ಮತ್ತು ಮಂಟಪ ಅಳವಡಿಸುವ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಹಿತಕರ ಘಟನೆಯಿಂದ ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ವಿದ್ಯುತ್ ತಂತಿ ತುಂಡಾಗಿ ನೀರಿಗೆ ಬಿದ್ದಿದೆ. ಇದನ್ನು ಯಾರೂ ಗಮನಿಸಲಿಲ್ಲ. ಮಹಿಳೆಯೊಬ್ಬರು ಕೆಲಸ ಮುಗಿಸಿ ಹೊರಡುವಾಗ ಕಬ್ಬಿಣದ ಗೇಟ್ ಸರಿಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ತಕ್ಷಣ ಆಕೆಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ವಿದ್ಯುತ್ ಸ್ಪರ್ಶವಾಗಿದೆ. ಇಬ್ಬರು ಮಹಿಳೆಯರು ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ.

0 ಕಾಮೆಂಟ್ಗಳು