ಬೆಳಗಾವಿ: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಗ್ರಾಮಕ್ಕೆ ಬಂದಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಗಾಯಗೊಂಡಿರುವ ಘಟನೆ ಕಾಗವಾಡ ತಾಲೂಕಿನ ಜುಗುಲ್ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದಾರೆ ಯುವಕನ ಹೆಸರು ಮಹೇಶ ಹುನ್ನರಗಿ (22) ಎಂದು ಗುರುತಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಸೂರು ಹತ್ತಿದ ಯುವಕನಿಗೆ ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ಯುವಕನ ಮುಖ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ. ನಂತರ ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಲಾಯಿತು. ಪ್ರವಾಹ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಗ್ರಾಮಕ್ಕೆ ಬಂದಾಗ ಅವಘಡ ಸಂಭವಿಸಿದೆ.