ಬೆಳಗಾವಿ: ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮ ವ್ಯಾಪ್ತಿಯಲ್ಲಿ ಬಾಲಕನೊಬ್ಬ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರುಣ್ ಖಾದಿ (4) ಮೃತ ದುರ್ದೈವಿ.

ಆಟವಾಡಲು ಘಟಪ್ರಭಾ ನದಿಯ ಎಡ ಕಾಲುವೆ ಬಳಿ ಹೋದ ಅರುಣ್ ಫುಟ್ ಪಾತ್ ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದಾಗಿ ಕಾಲುವೆಗೆ ನೀರು ಬಿಡಲಾಗಿದೆ. ಕಾಲುವೆಗೆ ಬಿದ್ದ ಮಗು ನೀರಿನಲ್ಲಿ ಮುಳುಗಿತು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.