ಚಿತ್ರದುರ್ಗದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಲಾರಿ ಚಾಲಕ ಸೇರಿದಂತೆ 9 ಮಂದಿ ಸಜೀವ ದಹನವಾಗಿದ್ದು, ಸುಟ್ಟು ಕರಕಲಾದ ಮೃತದೇಹ ಪತ್ತೆಗೆ ಪೊಲೀಸರು ಪರದಾಡುತ್ತಿದ್ದಾರೆ.
ಚಿತ್ರದುರ್ಗ (ಡಿ.25): ರಾಜ್ಯವನ್ನೇ ನಡುಗಿಸಿದ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ. ಕ್ರಿಸ್‌ಮಸ್ ರಜೆಗೆ ಹೊರಟಿದ್ದವರನ್ನು ಜವರಾಯ ಹೊತ್ತೊಯ್ದಿದ್ದಾನೆ. ನಿದ್ದೆ
ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' (Sea Bird) ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಹಲವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

0 ಕಾಮೆಂಟ್‌ಗಳು